ಕೋಲಾರ: ನಗರಸಭೆ ವ್ಯಾಪ್ತಿಯ ವಾರ್ಡ್ ನಂ 16ರ ಸದಸ್ಯ ಫೈರೋಜ್ ಖಾನ್ ನೇತೃತ್ವದಲ್ಲಿ ಸುಮಾರು 1.46 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಅವರು ಗುದ್ದಲಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ನಗರಸಭೆ ವ್ಯಾಪ್ತಿಗೆ ಅಲ್ಪಸಂಖ್ಯಾತರ ವಿಶೇಷ ಅನುದಾನದಲ್ಲಿ ಈಗಾಗಲೇ 10 ಕೋಟಿ ಅನುದಾನ ಬಿಡುಗಡೆಯಾಗಿದ್ದು ಅದರಲ್ಲಿ 5 ಕೋಟಿ ವೆಚ್ಚದ ಕಾಮಗಾರಿಗಳು ಮುಗಿದಿದ್ದು ಉಳಿದ 5 ಕೋಟಿ ವೆಚ್ಚದ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ ಈ ರಸ್ತೆಗೆ ಹಿಂದೆ ಮೂರುನಾಲ್ಕು ಬಾರಿ ಗುದ್ದಲಿ ಪೂಜೆ ಸಲ್ಲಿಸಿದ್ದಾರೆ ಆದರೆ ಕಾಮಗಾರಿ ಪ್ರಾರಂಭಿಸಿಲ್ಲ ಎಂದು ದೂರುಗಳು ಬಂದಿದೆ ಮತ್ತೆ ದೂರುಗಳ ಬರಬಾರದು ಕೂಡಲೇ ಕಾಮಗಾರಿಯನ್ನು ಪ್ರಾರಂಭಿಸಿ 10 ದಿನದಲ್ಲಿ ಮುಗಿಸಬೇಕು ಎಂದು ಗುತ್ತಿಗೆದಾರನಿಗೆ ಸೂಚಿಸಿದರು
ನಗರಸಭೆ ವ್ಯಾಪ್ತಿಯ ಅಭಿವೃದ್ಧಿಗೆ 30 ಕೋಟಿ ರೂಪಾಯಿಗಳ ಮುಖ್ಯಮಂತ್ರಿ ವಿಶೇಷ ಅನುದಾನವು ಬಿಡುಗಡೆಯಾಗಿದೆ ನಗರಸಭೆ ವ್ಯಾಪ್ತಿಯ ಅಭಿವೃದ್ಧಿಯ ದೃಷ್ಟಿಯಿಂದ ಕಾಮಗಾರಿಗಳು ಕುರಿತಂತೆ ರೂಪರೇಷೆಗಳನ್ನು ರಚಿಸಲು ಖಾಸಗಿ ಸಂಸ್ಥೆಗೆ ಜವಾಬ್ದಾರಿ ನೀಡಲಾಗಿದ್ದು ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಯುಜಿಡಿ ಇಲ್ಲದ ಕಡೆಯೂ ಯುಜಿಡಿ ಮಾಡಿಸಲು ಕ್ರಮ ವಹಿಸಿ ಸುಂದರ ನಗರ ನಿರ್ಮಾಣಕ್ಕೆ ಅಧ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರಿಗೆ ಸಮಸ್ಯೆಗಳ ಬಗ್ಗೆ ಗಮನಕ್ಕೆ ತಂದರು ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಕುರಿಗಳ ರಮೇಶ್, ಉಪಾಧ್ಯಕ್ಷೆ ಸಂಗೀತಾ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನಗರಸಭೆ ಸದಸ್ಯರಾದ ಎನ್.ಅಂಬರೀಷ್, ಅಫ್ಸರ್, ಏಜಾಜ್ ಪಾಷ, ಸುರೇಶ್ ಬಾಬು, ಷಾಮೀರ್ ಪಾಷ, ಸೈಯದ್ ಸಮೀ, ಹಿದಾಯತ್, ಷಫಿ, ಏಜಾಜ್ ಪಾಷ, ರಫೀಕ್, ಸಾಧೀಕ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಟ್ರಾಕ್ಟರ್ ಮುಸ್ತಫಾ, ನಜೀರ್, ಗೌಸ್ ಪೀರ್, ನಜೀರ್, ಆರೀಫ್, ಅಯೂಬ್, ಅಸ್ಲಂ, ಸೀಪೂರ್ ಅಕ್ರಂ, ಅರ್ಬಾಜ್ ಮುಂತಾದವರು ಉಪಸ್ಥಿತರಿದ್ದರು.