ಕೋಲಾರ: RTO ಕಚೇರಿಯಲ್ಲಿ ಸಾರ್ವಜನಿಕರ ದೂರಿನ ಮೇರೆಗೆ ಶಾಸಕ ಕೊತ್ತೂರು ಜಿ ಮಂಜುನಾಥ್ ಸೋಮವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಮಾತನಾಡಿ ಶಾಸಕ ಕೊತ್ತೂರು ಮಂಜುನಾಥ್ ಆರ್ ಟಿ ಓ ಕಛೇರಿಯಲ್ಲಿ ಬ್ರೋಕರ್ ಗಳನ್ನು ದೂರವಿಟ್ಟು ಸಾರ್ವಜನಿಕರಿಗೆ ನೇರವಾಗಿ ಸ್ಪಂದಿಸಬೇಕು ಡ್ರೈವಿಂಗ್ ಲೈಸೆನ್ಸ್ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆಯಲ್ಲಿ ವಿಳಂಬದಿಂದ ಸಾರ್ವಜನಿಕರು ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದು ಈ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ಕೋಚಿಮುಲ್ ವಿಭಜನೆ ಮಾಡಿ ಚುನಾವಣೆ ನಡೆಸಲು ಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರ ಒತ್ತಾಯ
ಜಿಲ್ಲೆಯಾದ್ಯಂತ ಖಾಸಗಿ ಬಸ್ ಗಳು ನಿಗದಿತ ಮಾರ್ಗದಲ್ಲಿ ಅನುಮತಿ ಹೊಂದಿದ್ದರೂ ನಿಯಮಬಾಹಿರವಾಗಿ ಸಂಚರಿಸುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಅನ್ಯ ಮಾರ್ಗದ ಪರ್ಮಿಟ್ ಹೊಂದಿರುವ ಬಸ್ಸುಗಳ ಪ್ರವೇಶವಾಗಿದ್ದು ಅಂತಹ ಬಸ್ಸುಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಕಚೇರಿಯಲ್ಲಿ ಖಾಲಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆದ ಶಾಸಕರು, ತಕ್ಷಣ ಖಾಲಿ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಸಂಜಯ್ ರೆಡ್ಡಿ , ಮುಖಂಡರಾದ ಉರಟಾಗ್ರಹಾರ ಚೌಡರೆಡ್ಡಿ, ಮಲೇಷಿಯಾ ರಾಜಕುಮಾರ್ ಮುಂತಾದವರು ಇದ್ದರು