75 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಗುದ್ದಲಿ ಪೂಜೆ

ಕೋಲಾರ: ನಗರಸಭೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ 35 ಲಕ್ಷ ವೆಚ್ಚದ ಸಿಸಿ ರಸ್ತೆ ಮತ್ತು ಹೊನ್ನೇನಹಳ್ಳಿ ಗ್ರಾಪಂ ವ್ಯಾಪ್ತಿಯ ಕಳ್ಳಿಪುರದಿಂದ ಶಿಳ್ಳಂಗೆರೆ ಗ್ರಾಮಕ್ಕೆ ಹೋಗುವ 40 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಸೋಮವಾರ ಶಾಸಕ ಕೊತ್ತೂರು ಮಂಜುನಾಥ್, ಎಂಎಲ್ಸಿಗಳಾದ ಇಂಚರ ಗೋವಿಂದರಾಜು, ಎಂ.ಎಲ್ ಅನಿಲ್ ಕುಮಾರ್ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಈ ಹಿಂದೆ ಕಳ್ಳಿಪುರ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿತ್ತು ಹಳೆಯದಾಗಿದ್ದ ರಸ್ತೆಯನ್ನು ಈಗ ಪುನರ್‌ ಅಭಿವೃದ್ಧಿ ಪಡಿಸಲಾಗುತ್ತಿದೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವದ್ಧಿ ಪಡಿಸುವ ನಿಟ್ಟಿನಲ್ಲಿ ಸರಕಾರದಿಂದ ಹೆಚ್ಚಿನ ಅನುದಾನವು ಬಿಡುಗಡೆಯಾಗಿದ್ದು ಹಂತಹಂತವಾಗಿ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ ಗ್ರಾಮೀಣಾಭಿವದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾಮಗಾರಿಯಾಗಿದ್ದು ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಗ್ರಾಮಸ್ಥರು ಸಹ ಗುತ್ತಿಗೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಗ್ರಾಮೀಣ ರಸ್ತೆಗಳು ಸುಧಾರಣೆಗೊಂಡರೆ ರೈತರಿಗೆ ತಮ್ಮ ಜಮೀನುಗಳಿಂದ ಆಹಾರ ಧಾನ್ಯ ಸಾಗಿಸಲು ಅನುಕೂಲವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಾಮಮೂರ್ತಿ, ಎಇಇ ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಚಂಜಿಮಲೆ ರಮೇಶ್, ಯಲವಾರ ಸೊಣ್ಣೇಗೌಡ, ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ನಗರಸಭಾ ಸದಸ್ಯರಾದ ಮುರಳಿಗೌಡ, ಮಂಜುನಾಥ್, ಜಗದೀಶ್, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಛತ್ರಕೋಡಿಹಳ್ಳಿ ಮಂಜುನಾಥ್, ವೆಂಕಟೇಶಪ್ಪ, ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ನಡುಪಹಳ್ಳಿ ಸಂತೋಷ್, ಈಕಂಬಳ್ಳಿ ಚೌಡಪ್ಪ, ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗರತ್ನಮ್ಮ ಗಣೇಶ್ ಕಳ್ಳಿಪುರ ಜಗದೀಶ್, ಮುಂತಾದವರು ಇದ್ದರು.

Leave a Reply

Your email address will not be published. Required fields are marked *