ಇನ್ಮುಂದೆ ಡಿಜಿಟಲ್‌ ಮಾಧ್ಯಮಗಳಿಗೂ ಸರ್ಕಾರಿ ಜಾಹೀರಾತು: ಇಲ್ಲಿದೆ ನೋಡಿ ಮಾರ್ಗಸೂಚಿ

ಬೆಂಗಳೂರು: ಡಿಜಿಟಲ್ ಮೀಡಿಯಾಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಯೂಟ್ಯೂಬ್, ಫೇಸ್‌ಬುಕ್‌, ವೆಬ್ ಸೈಟ್, ಇನ್ಸ್ಟಾಗ್ರಾಮ್, ಒಟಿಟಿ, ಮೊಬೈಲ್ ಆಪ್, ಟೆಲಿಗ್ರಾಂ, ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯನ್ನು ಪ್ರಸಾರ ಮಾಡುವ ಡಿಜಿಟಲ್ ಮಾಧ್ಯಮಗಳಿಗೆ ಜಾಹೀರಾತು ನೀಡಲಿದೆ.

ಹೌದು… ಇತ್ತೀಚಿನ ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಬದಲಾಗಿದೆ. ಇಂಟರ್ನೆಟ್, ಕಂಪ್ಯೂಟರ್, ಸ್ಮಾರ್ಟ್ ಟಿವಿ, ಮೊಬೈಲ್ ಫೋನ್ ಹಾಗೂ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿರುವುದರಿಂದ ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್ ಜಾಹೀರಾತುಗಳು ಹೆಚ್ಚು ಪ್ರಭಾವಶಾಲಿಯಾಗಿವೆ. ಡಿಜಿಟಲ್ ಜಾಹೀರಾತುಗಳು ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪಲು ಸಹಕಾರಿಯಾಗಿವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ತಲುಪಿಸಲು ಡಿಜಿಟಲ್ ಜಾಹೀರಾತು ಬಳಸಿಕೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತೀರ್ಮಾನಿಸಿದೆ.

ಡಿಜಿಟಲ್ ಮಾಧ್ಯಮ ಘಟಕಕ್ಕೆ ಅರ್ಹತೆ:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯೊಂದಿಗೆ ಡಿಜಿಟಲ್ ಜಾಹೀರಾತು ನೀಡಲು ಎಂಪ್ಯಾನೆಲ್‌ಮೆಂಟ್ ಗೆ ಅರ್ಹತೆ ಪಡೆಯಲು ಡಿಜಿಟಲ್ ಮಾಧ್ಯಮ ಘಟಕವು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು. ಡಿಜಿಟಲ್ ಘಟಕವು ಕಡ್ಡಾಯವಾಗಿ:

1. ಭಾರತದ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಂಪನೀಸ್‌ನಲ್ಲಿ ನೋಂದಣಿಯಾದ ಕಾನೂನುಬದ್ಧ ಸಂಘಟಿತ ಘಟಕವಾಗಿರಬೇಕು- ಪ್ರೈವೇಟ್ ಲಿಮಿಟೆಡ್ ಕಂಪನಿ, ಪಬ್ಲಿಕ್ ಲಿಮಿಟೆಡ್ ಕಂಪನಿ, ಪಾಲುದಾರಿಕೆ, ಲಿಮಿಟೆಡ್ ಲಯಬಿಲಿಟಿ ಪಾಲುದಾರಿಕೆ.

2. ಎಂಪ್ಯಾನಲಿಂಗ್ ಸಮಯದಲ್ಲಿ ಕನಿಷ್ಠ ಒಂದು ವರ್ಷವಾಗಿರಬೇಕು.

3. ಕನಿಷ್ಠ ಒಂದು ವರ್ಷ ಕಾಲ ಯಾವುದೇ ಸಮಯದ ಅಂತರವಿಲ್ಲದೆ ನಿರಂತರವಾಗಿ ಕಂಟೆಂಟ್ ಪ್ರಕಟಿಸಿರಬೇಕು.

4. ಮಾನ್ಯತೆ ಇರುವ ಜಿಎಸ್‌ಟಿ ನೋಂದಣಿ ಇರಬೇಕು.

5. ರಾಜ್ಯ ಅಥವಾ ಕೇಂದ್ರ ಸರ್ಕಾರ ಅಥವಾ ಅದರ ಏಜೆನ್ಸಿಗಳ ಎಲ್ಲ ಶಾಸನಬದ್ಧ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರ ಎಂಪ್ಯಾನೆಲ್‌ಮೆಂಟ್ ರದ್ದುಗೊಳಿಸಲಾಗುತ್ತದೆ.

6. ಭಾರತದ ಕಾನೂನನ್ನು ಉಲ್ಲಂಘಿಸುವ ಪದ, ದೃಶ್ಯಗಳು, ಆಡಿಯೋ ಅಥವಾ ಅಂತಹ ಯಾವುದೇ ವಿಷಯವನ್ನು ಪ್ರಕಟಿಸಿರಬಾರದು.

ಡಿಜಿಟಲ್ ಜಾಹೀರಾತು ಏಜೆನ್ಸಿಗೆ ಅರ್ಹತೆ:
ಡಿಜಿಟಲ್ ಜಾಹೀರಾತಿಗಾಗಿ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾವರ್ಜನಿಕ ಸಂಪರ್ಕ ಇಲಾಖೆಯೊಂದಿಗೆ ಸಹಯೋಗ ಹೊಂದಲು ಏಜೆನ್ಸಿಯು ಈ ಕೆಳಗಿನ ಮಾನದಂಡಗಳನ್ನು ಪೂರೈಸಬೇಕು. ಏಜೆನ್ಸಿಯು ಎಂಪ್ಯಾನೆಲ್ ಮಾಡಿದ ಡಿಜಿಟಲ್ ಘಟಕಗಳಲ್ಲಿ ಮಾತ್ರ ಜಾಹೀರಾತು ನೀಡತಕ್ಕದ್ದು. ಏಜೆನ್ಸಿಯು ಕಡ್ಡಾಯವಾಗಿ:

1. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಂಪನೀಸ್‌ನಲ್ಲಿ ನೋಂದಣಿಯಾದ ಕಾನೂನುಬದ್ಧ ಸಂಘಟಿತ ಘಟಕವಾಗಿರಬೇಕು – ಪ್ರೈವೇಟ್ ಲಿಮಿಟೆಡ್ ಕಂಪನಿ, ಪಬ್ಲಿಕ್ ಲಿಮಿಟೆಡ್ ಕಂಪನಿ, ಪಾಲುದಾರಿಕೆ, ಲಿಮಿಟೆಡ್ ಲಯಬಿಲಿಟಿ ಪಾಲುದಾರಿಕೆ.

2. ಎಂಪ್ಯಾನೆಲಿಂಗ್ ಸಮಯದಲ್ಲಿ ಕನಿಷ್ಠ ಎರಡು ವರ್ಷವಾಗಿರಬೇಕು.

3. ಮಾನ್ಯವಾದ ಜಿಎಸ್‌ಟಿ ನೋಂದಣಿ ಇರಬೇಕು.

4. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರಬೇಕು ಅಥವಾ ಕರ್ನಾಟಕದಲ್ಲಿ ಪೂರ್ಣ ಪ್ರಮಾಣದ ಕಚೇರಿ ಇರಬೇಕು.

5. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಾವೀಣ್ಯತೆ ಇರಬೇಕು.

6. ಡಿಜಿಟಲ್ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣದ ಕುರಿತು ಆಳವಾದ ಜ್ಞಾನವಿರಬೇಕು.

7. ಸರ್ಕಾರಗಳಿಗೆ ಪ್ಲಾಟ್ಫಾರ್ಮ್ ಗಳಲ್ಲಿ ಡಿಜಿಟಲ್ ಜಾಹೀರಾತು ನೀಡಲು ಗೂಗಲ್ ಮತ್ತು / ಅಥವಾ ಮೆಟಾ ಅಥವಾ ತತ್ಸಮಾನ ಡಿಜಿಟಲ್ ಮಾಧ್ಯಮ ಸಂಸ್ಥೆಯೊಂದಿಗೆ ಜೊತೆಗೆ ಮಾನ್ಯವಾದ ಒಪ್ಪಂದ/ಒಡಂಬಡಿಕೆ ಹೊಂದಿರಬೇಕು.

8. ತಮ್ಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸರ್ಕಾರಿ ಪ್ರಚಾರ ಮಾಡಲು ಮತ್ತು/ಅಥವಾ ಮೆಟಾ ಅಥವಾ ತತ್ಸಮಾನ ಡಿಜಿಟಲ್ ಮಾಧ್ಯಮ ಸಂಸ್ಥೆಯಿಂದ ಅನುಮತಿ ಇರಬೇಕು.

9. ರಾಜ್ಯ ಅಥವಾ ಕೇಂದ್ರ ಸರ್ಕಾರ ಅಥವಾ ಅದರ ಏಜೆನ್ಸಿಗಳ ಎಲ್ಲ ಶಾಸನಬದ್ಧ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರೆ ಎಂಪ್ಯಾನೆಲ್‌ಮೆಂಟ್ ರದ್ದುಗೊಳಿಸಲಾಗುತ್ತದೆ.

Leave a Reply

Your email address will not be published. Required fields are marked *