ಕೋಲಾರ: ಜಮ್ಮು ಮತ್ತು ಕಾಶ್ಮೀರ ಹಾಗೂ ಭಾರತದ ಗಡಿಭಾಗದಲ್ಲಿ ಪಾಕಿಸ್ಥಾನದ ಷಡ್ಯಂತ್ರದಿಂದ ನಡೆಯುತ್ತಿರುವ ದಾಳಿಯಲ್ಲಿ ಗಾಯಾಳುಗಳಾಗಿರುವ ಸೈನಿಕರಿಗಾಗಿ ಅವಶ್ಯವಿರುವ ರಕ್ತವನ್ನು ನೀಡುವ ಉದ್ದೇಶದಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ನೇತೃತ್ವದಲ್ಲಿ ಗುರುವಾರ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು
ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಲಯನ್ಸ್ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ನಡೆದ ರಕ್ತದಾನ ಶಿಬಿರದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನ ಯುವಕರು ರಕ್ತದಾನ ಮಾಡುವುದರ ಮೂಲಕ ಸಾರ್ಥಕತೆ ಮೆರೆದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಮಾತನಾಡಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಹಿನ್ನೆಲೆ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾಕಿಸ್ತಾನದೊಂದಿಗೆ ಯುದ್ಧ ಮಾಡಿ ಎರಡು ಭಾಗ ಮಾಡಿದರು ಆದರೆ 56 ಇಂಚಿನ ಎದೆಗಾರಿಕೆ ಇದೆ ಎನ್ನುವ ಮೋದಿ ಯಾವುದೇ ಧೈರ್ಯ ತೋರಲಿಲ್ಲ ನಮ್ಮ ಯೋಧರು ಆಪರೇಷನ್ ಸಿಂದೂರ ಮಾಡಿ ಪಾಕಿಸ್ತಾನಕ್ಕೆ ಬುದ್ಧಿ ಕಲಿಸಿದ್ದಾರೆ ಮುಂದಿನ ದಿನಗಳಲ್ಲಿಯೂ ಉಗ್ರರಿಗೆ ನಮ್ಮ ಸೈನಿಕರು ತಕ್ಕ ಪಾಠ ಕಲಿಸುತ್ತಾರೆ ಭಾರತೀಯ ಸೈನಿಕರಿಗೆ ಯುವಕರು ರಕ್ತದಾನ ಮಾಡಲು ಮುಂದಾಗಿದ್ದು ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾದ ಹರೀಶ್, ವಾಸುದೇವರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಿಯಾಜ್ ಗೋರು, ಬಾಬು ಜಾನ್ ಷಮ್ಸ್, ಕೋಲಾರ ತಾಲೂಕು ಅಧ್ಯಕ್ಷ ಸುಹೈಲ್, ನಗರ ಬ್ಲಾಕ್ ಅಧ್ಯಕ್ಷ ಅರ್ಬಾಜ್, ಗ್ರಾಮಾಂತರ ಅಧ್ಯಕ್ಷ ಬರ್ಕತ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಲಾರೆನ್ಸ್, ಮುಳಬಾಗಿಲು ತಾಲೂಕು ಅಧ್ಯಕ್ಷ ಸೂರಿ, ಶ್ರೀನಿವಾಸಪುರ ತಾಲೂಕು ಅಧ್ಯಕ್ಷ ಮನೋಹರ್, ಮುಂತಾದವರು ಇದ್ದರು.