ಕೊಂಡರಾಜನಹಳ್ಳಿ ಗ್ರಾ.ಪಂ.ಗೆ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ರಾಜೇಶ್, ಉಪಾಧ್ಯಕ್ಷರಾಗಿ ವೆಂಕಟಮ್ಮ ಆಯ್ಕೆ

ಕೋಲಾರ: ತಾಲೂಕಿನ ಕೊಂಡರಾಜನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಖಾದ್ರಿಪುರ ರಾಜೇಶ್ ಹಾಗೂ ಉಪಾಧ್ಯಕ್ಷೆಯಾಗಿ ವೆಂಕಟಮ್ಮ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದೆ ಅಧ್ಯಕ್ಷರಾಗಿದ್ದ ವಿಜಯನಗರ ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿದ್ದ ನಾರಾಯಣಮ್ಮ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಈ ಸ್ಥಾನಕ್ಕೆ ಸೋಮವಾರ ಚುನಾವಣೆ ನಿಗದಿಯಾಗಿತ್ತು ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಚುನಾವಣೆ ಪ್ರಕ್ರಿಯೆಯಿಂದ ದೂರ ಉಳಿದು ಕಾಂಗ್ರೆಸ್ ಬೆಂಬಲಿತ 13 ಸದಸ್ಯರು ಮಾತ್ರ ಭಾಗವಹಿಸಿದ್ದರು,

ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ಇನ್ಯಾವುದೇ ನಾಮಪತ್ರ ಸಲ್ಲಿಸದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಹರಿಕೃಷ್ಣ ಕರ್ತವ್ಯ ನಿರ್ವಹಿಸಿದ್ದರು ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರನ್ನು ಸದಸ್ಯರು ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ರಾಜೇಶ್ ಮಾತನಾಡಿ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಜೊತೆಗೆ ಇನ್ನೂ ಉಳಿದ ಒಂದು ವರ್ಷದಲ್ಲಿ ಪಕ್ಷಾತೀತವಾಗಿ ಎಲ್ಲಾ ಸದಸ್ಯರ ಮಾರ್ಗದರ್ಶನ ಹಾಗೂ ಸಲಹೆ ಸೂಚನೆಗಳನ್ನು ಪಡೆದು ಮಾದರಿ ಗ್ರಾಮ ಪಂಚಾಯತಿಯಾಗಿ ಕಾರ್ಯನಿರ್ವಹಿಸುತ್ತೇನೆ ಎಂದರು

ಗ್ರಾಪಂ ಮಾಜಿ ಅಧ್ಯಕ್ಷರಾಗಿ ವಿಜಯನಗರ ಮಂಜುನಾಥ್, ನಾಗರತ್ನಮ್ಮ ಬಾಬು, ಅಮ್ಮೇರಹಳ್ಳಿ ಚಲಪತಿ, ಪುಷ್ಪಮ್ಮ, ಸದಸ್ಯರಾದ ಪ್ರಕಾಶ್, ಜಯಮ್ಮ ಬಸವರಾಜ್, ನಾರಾಯಣಮ್ಮ, ನಿಂಗಪ್ಪ, ಪುಷ್ಪ ಕೃಷ್ಣಪ್ಪ, ರಿಜ್ವಾನ್, ಮುನಿಯಪ್ಪ, ಮುಖಂಡರಾದ ಛತ್ರಕೋಡಿಹಳ್ಳಿ ಮಂಜುನಾಥ್, ಪ್ರಸಾದ್, ಜೆಸಿಬಿ ಮಂಜು, ಖಾದ್ರಿಪುರ ಬಾಬು, ದೊಡ್ಡಣ್ಣ, ಅಶೋಕ್, ತುರಾಂಡಹಳ್ಳಿ ಶಂಕರ್, ಬಾಬರ್, ಶ್ಯಾಮ್ ಬಾಬು, ನಿಜಾಮ್, ಮುಂತಾದವರು ಇದ್ದರು

Leave a Reply

Your email address will not be published. Required fields are marked *