
ಕೋಲಾರ: ಮುಂಬರುವ 2026ನೇ ಸಾಲಿನಲ್ಲಿ ವಿಧಾನ ಪರಿಷತ್ಗೆ ಆಗ್ನೇಯ ಪದವೀಧರ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ ಸಂಯುಕ್ತ ಜನತಾ ದಳ (ಜೆಡಿಯು) ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕೋಲಾರ ತಾಲೂಕಿನ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಜೆಡಿಯು ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಹಿಮ ಜೆ ಪಾಟೀಲ್ ಅವರ ಸಮ್ಮುಖದಲ್ಲಿ ಘೋಷಣೆ ಮಾಡಿದ್ದಾರೆ. ಅಗ್ನೇಯ ಪದವೀಧರ ಕ್ಷೇತ್ರಕ್ಕೆ ಡಾ.ಕೆ.ನಾಗರಾಜ್ ರವರು ಚಿರಪರಚಿತರು ಹಾಗೂ ಈಗಾಗಲೇ ಈ ಕ್ಷೇತ್ರದಲ್ಲಿ ಒಂದು ಬಾರಿ ಪದವೀಧರ ಕ್ಷೇತ್ರ ಹಾಗೂ ಎರಡು ಬಾರಿ ಶಿಕ್ಷಕರ ಕ್ಷೇತ್ರಕ್ಕೆ ಸ್ಪರ್ದಿಸಿದ್ದರು. ಒಂದು ಬಾರಿ ಕೆಲವೇ ಕೆಲವು ಮತಗಳಿಂದ ಸೋತಿದ್ದಾರೆ. ಜೆಡಿಯು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿಕೊಂಡು ರಾಜ್ಯಾದ್ಯಂತ ಪದವೀಧರ ಮತ್ತು ಶಿಕ್ಷಕರ ಧ್ವನಿಯಾಗಿದ್ದರು.
ಹಾಗಾಗಿ 2026ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ನ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಸ್ಪರ್ಧಿಸಲು ಸಂಯುಕ್ತ ಜನತಾ ದಳ (ಜೆಡಿಯು) ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಲ್ಲಂಡೂರು ಗ್ರಾಮದ ಡಾ.ಕೆ ನಾಗರಾಜ್ ಅವರನ್ನು ಆಯ್ಕೆ ಮಾಡಿ ಘೋಷಿಸಲಾಗಿದೆ.