ಕೋಲಾರ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ 16ನೇ ವಾರ್ಡ್‌ನ ಸದಸ್ಯ ಎ.ಫೈರೋಜ್ ಖಾನ್ ಅವಿರೋಧವಾಗಿ ಆಯ್ಕೆಯಾದರು.
ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವಿರೋಧ ಆಯ್ಕೆ ನಡೆಯದೇ ಚುನಾವಣೆ ನಡೆಸುವಂತೆ ಕೆಲ ಸದಸ್ಯರು ಒತ್ತಾಯಿಸಿದರು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೇವಲ ಏಳು ಮಂದಿ ಮಾತ್ರವೇ ಸಲ್ಲಿಸಿದ್ದರಿಂದ ಸದಸ್ಯರು ಅವಿರೋಧ ಆಯ್ಕೆಯಾದರು ಸದಸ್ಯರೆಲ್ಲಾ ಸೇರಿ ಎ.ಫೈರೋಜ್ ಖಾನ್ ಅವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಮಾಡಿದರು.
ಈ ಹಿಂದೆ ಖಾಲಿಯಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷಗಾದಿಗೆ ಶಾಸಕ ಕೊತ್ತೂರು ಮಂಜುನಾಥ್ ಬಣ ಮತ್ತು ಮಾಜಿ ಅಧ್ಯಕ್ಷ ಮುಬಾರಕ್ ಮಧ್ಯೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಚುನಾವಣೆ ಘೋಷಣೆ ಮಾಡಿದ ನಂತರ ಫೈರೋಜ್ ಖಾನ್ ಅವರಿಗೆ ಅಧ್ಯಕ್ಷಗಾದಿಯ ಪಟ್ಟ ಒಲಿಯಿತು.
ನಂತರ ಮಾತನಾಡಿದ ನೂತನ ಅಧ್ಯಕ್ಷ ಫೈರೋಜ್ ಖಾನ್ ನನ್ನ ಆಯ್ಕೆಗೆ ಸಹಕರಿಸಿದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ನಜೀರ್ ಆಹಮ್ಮದ್, ಅನಿಲ್‌ಕುಮಾರ್ ಹಾಗೂ ನಗರಸಭೆ ಅಧ್ಯಕ್ಷರು, ಸದಸ್ಯರು ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ನಗರದ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುತ್ತೇನೆ ನಗರಕ್ಕೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸೇರಿದಂತೆ ನಗರದ ಅಭಿವೃದ್ಧಿಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಉಪಾಧ್ಯಕ್ಷೆ ಸಂಗೀತಾ, ನೂತನ ಸ್ಥಾಯಿ ಸಮಿತಿ ಸದಸ್ಯರಾಗಿ ಷಮಾತಾಜ್, ಎನ್ ಅಂಬರೀಶ್, ನಗ್ಮಭಾನು, ಸುರೇಶ್ ಬಾಬು, ಪ್ರವೀಣ್ ಗೌಡ ಸೇರಿದಂತೆ ನಗರಸಭೆ ಸದಸ್ಯರು ಮುಖಂಡರು ಇದ್ದರು