ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳು ಸಂಸದ ಎಂ.ಮಲ್ಲೇಶ್ ಬಾಬು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನಪರವಾದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರತಿಯೊಂದು ಮನೆ ಬಾಗಿಲಿಗೆ ಮುಟ್ಟಿಸುವುದು ಕೆಲಸವನ್ನು ಅಧಿಕಾರಿ ವರ್ಗ ಮಾಡಿಕೊಂಡು ಬಂದಿದ್ದಾರೆ ಸರ್ಕಾರದ ಉದ್ದೇಶಕ್ಕೆ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ನೂತನವಾಗಿ ಆಯ್ಕೆಯಾಗಿರುವ ಸಮಿತಿಯು ನೌಕರಿ ಸ್ನೇಹಿಯಾಗಿ ಮುಂದಿನ ಐದು ವರ್ಷಗಳ ಕಾಲ ಕೆಲಸ ಮಾಡಲಿ ಎಂದು ಶುಭ ಕೋರಿದರು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಅಜಯ್ ಕುಮಾರ್ ಮಾತನಾಡಿ ಜಿಲ್ಲೆಯ ಸರ್ಕಾರಿ ನೌಕರರು ನನ್ನ ಮೇಲೆ ವಿಶ್ವಾಸವಿಟ್ಟು ಆಯ್ಕೆ ಮಾಡಿದ್ದಾರೆ ಮುಂದಿನ ದಿನಗಳಲ್ಲಿ ಸಂಘವನ್ನು ನೌಕರರ ಸ್ನೇಹಿಯಾಗಿ ರೂಪಿಸಲಾಗುವುದು ಜಿಲ್ಲಾಕೇಂದ್ರದಲ್ಲಿ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಸುಸಜ್ಜಿತ ನೌಕರರ ಭವನ ನಿರ್ಮಾಣ ಮಾಡಿ ಸಂಘವನ್ನು ಇಡೀ ರಾಜ್ಯಕ್ಕೆ ಮಾದರಿ ಸಂಘವನ್ನಾಗಿ ರೂಪಿಸಲಾಗುವುದು ಇದಕ್ಕೆ ತಮ್ಮಗಳ ಸಹಕಾರವು ಅತಿ ಮುಖ್ಯವಾಗಿದ್ದು ಸಹಕರಿಸುವಂತೆ ಮನವಿ ಮಾಡಿದರು
ಅಭಿನಂದನೆ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಎನ್.ಶ್ರೀನಿವಾಸರೆಡ್ಡಿ, ಖಜಾಂಚಿ ಮುರಳಿ ಮೋಹನ್, ಮಾಜಿ ಅಧ್ಯಕ್ಷ ಕೆ.ಎನ್ ಮಂಜುನಾಥ್, ಮಾಜಿ ಪದಾಧಿಕಾರಿಗಳಾದ ಎಸ್.ಚೌಡಪ್ಪ, ವಿಜಯ್, ಶಿವಕುಮಾರ್, ಸೋಮಶೇಖರ್, ನಾರಾಯಣಗೌಡ, ರಂಜಿತ್, ವರದರಾಜ್ ಮುಂತಾದವರು ಇದ್ದರು.