ಚಿಕ್ಕವಲಗಮಾದಿ ಗ್ರಾಮದಲ್ಲಿ ವೈಭವದಿಂದ ನಡೆದ ಶ್ರೀನಿವಾಸ ಕಲ್ಯಾಣೋತ್ಸವ: ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿ

ಕೋಲಾರ: ಬಂಗಾರಪೇಟೆ ತಾಲೂಕಿನ ಕಸಬಾ ಹೋಬಳಿಯ ದೊಡ್ಡ ವಲಗಮಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ವಲಗಮಾದಿ ಗ್ರಾಮದ 700 ವರ್ಷಗಳ ಇತಿಹಾಸವುಳ್ಳ ಶ್ರೀದೇವಿ, ಭೂದೇವಿ ಸಮೇತ ಶ್ರೀತಿಮ್ಮರಾಯಸ್ವಾಮಿ ದೇವಾಲಯದಲ್ಲಿ ಶುಕ್ರವಾರ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀನಿವಾಸ ಕಲ್ಯಾಣೋತ್ಸವವು ಸತತ ಮೂರನೇ ಬಾರಿಗೆ ದೇವಾಲಯದ ಧರ್ಮಾಧಿಕಾರಿಗಳು ಹಾಗೂ ಕರ್ನಾಟಕ ಆಹಾರ ಗುತ್ತಿಗೆದಾರರಾದ ಆರ್.ಮುನಿರಾಜು ರವರ ನೇತೃತ್ವದಲ್ಲಿ ಅತ್ಯಂತ ವೈಭವದಿಂದ ನಡೆಯಿತು.

ಬೆಳಿಗ್ಗೆ ಸುಪ್ರಭಾತ ಸೇವೆ, ಗಣಪತಿ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ, ಶ್ರೀನಿವಾಸ ಕಲ್ಯಾಣ, ಪೂರ್ಣಾವತಿ, ಪಂಚಾಮೃತ ಅಭಿಷೇಕ, ಕುಂಭಾಭಿಷೇಕ, ಪುಷ್ಪಾಲಂಕಾರ, ಅಷ್ಟವದಾನ ಸೇವೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಡೆಯಿತು.ಸಹಸ್ರಾರು ಸಂಖ್ಯೆಯಲ್ಲಿನ ಭಕ್ತರ ನಡುವೆ ಶ್ರೀನಿವಾಸ ಕಲ್ಯಾಣೋತ್ಸವವು ವೈಭವದಿಂದ ನಡೆದಿದ್ದು,ಭಕ್ತರು ಈ ವೇಳೆ ಗೋವಿಂದನ ನಾಮ ಸ್ಮರಣೆ ಮಾಡುತ್ತಾ ಪುನೀತರಾದರು.

ಈ ಸಂದರ್ಭದಲ್ಲಿ ಬುದಿಕೋಟೆ ಸಬ್ ಇನ್ಸ್ಪೆಕ್ಟರ್ ಸುನಿಲ್, ಹರೀಶ್, ಗ್ರಾಮ ಪಂಚಾಯತಿ ಸದಸ್ಯರಾದ ಮಲ್ಲೇಶ್ ಚೌಡಪ್ಪ ಪಿಡಿಒ ಮಧುಚಂದ್ರ, ಎಂ.ಮುನಿರಾಜು, ತಾಲೂಕು ಕುರುಬರ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ ಮುಂತಾದವರು ಇದ್ದರು.

Leave a Reply

Your email address will not be published. Required fields are marked *