ಕೋಲಾರ: ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಬುಧವಾರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ ಹಾಗೂ ನೂತನ ಅಧ್ಯಕ್ಷ ವಿ.ಎಂ ಮುನಿಯಪ್ಪ, ಮತ್ತು ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭವು ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುತ್ತಿದ್ದು, ಅವುಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲರೂ ಶ್ರಮಿಸಬೇಕು. ಸರ್ಕಾರದೊಂದಿಗೆ ಸಮಿತಿಗಳ ಸದಸ್ಯರು ಅಧಿಕಾರಿಗಳು ಶ್ರಮಿಸಿದಾಗ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ತಾಲ್ಲೂಕು ಸಮಿತಿ ಅಧ್ಯಕ್ಷ ಮುನಿಯಪ್ಪ ಹಾಗೂ ಪದಾಧಿಕಾರಿಗಳ ಜೊತೆ ನಿರಂತರವಾಗಿ ಸಭೆ ಮಾಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ರಾಜ್ಯ ಸರ್ಕಾರ ಕಳೆದ ವರ್ಷ ಜಾರಿಗೊಳಿಸಿದ ಐದು ಯೋಜನೆಗಳು ನಿರಂತರವಾಗಿ ಮುಂದುವರಿದಿವೆ. ರಾಜ್ಯಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿ ರಚಿಸುವ ಮೂಲಕ ಯೋಜನೆ ಕ್ರಮಬದ್ಧವಾಗಿ ಜಾರಿಗೊಳ್ಳಲು ಸರ್ಕಾರ ಯತ್ನಿಸಿದೆ. ಯಾವುದೇ ಕಾರಣಕ್ಕೂ ಅರ್ಹರು ಯೋಜನೆಯಿಂದ ವಂಚಿತರಾಗಬಾರದು ಎನ್ನುವ ಧ್ಯೇಯಕ್ಕೆ ಇಂದಿಗೂ ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಸಮಿತಿ ಸದಸ್ಯರು ಸಾರ್ವಜನಿಕರಿಗೆ ನ್ಯಾಯ ದೊರಕಿಸುವಲ್ಲಿ ಪ್ರಮಾಣಿಕ ಕೆಲಸ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳು ಜನರಿಗೆ ಶಕ್ತಿಯನ್ನು ತುಂಬಿಸುತ್ತಿವೆ ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರವಾಗಿದೆ ಮೊಟ್ಟ ಮೊದಲ ಕ್ಯಾಬಿನೆಟ್ ನಲ್ಲಿಯೇ ಜನರಿಗೆ ಆಶ್ವಾಸನೆ ನೀಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ನಮ್ಮ ಪಕ್ಷವು ಯಾವುದೇ ಜಾತಿ ಧರ್ಮ ಬೇದವಿಲ್ಲದೆ ಎಲ್ಲಾ ವರ್ಗದವರಿಗೆ ಅವಕಾಶಗಳನ್ನು ಕಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ತಹಶಿಲ್ದಾರ್ ನಯನ, ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಹಿರಿಯ ದಲಿತ ಮುಖಂಡ ಸಿ.ಎಂ ಮುನಿಯಪ್ಪ, ತಾಪಂ ಇಒ ಮಂಜುನಾಥ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಕೋಚಿಮುಲ್ ನಿರ್ದೇಶಕ ಷಂಷೀರ್, ಮಾಜಿ ನಿರ್ದೇಶಕ ಛತ್ರಕೋಡಿಹಳ್ಳಿ ರಾಮಕೃಷ್ಣೇಗೌಡ, ಕೆಡಿಪಿ ಸದಸ್ಯ ಮಣಿಘಟ್ಟ ಸೊಣ್ಣೇಗೌಡ, ನಗರಸಭೆ ಸದಸ್ಯರಾದ ಅಂಬರೀಷ್, ಮಂಜುನಾಥ್, ಮುಖಂಡರಾದ ಗಂಗಣ್ಣ ಮೈಲಾಂಡಹಳ್ಳಿ ಮುರಳಿ, ಮುನಿಆಂಜಿನಪ್ಪ, ವಿ.ನಾಗರಾಜ್, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಛತ್ರಕೋಡಿಹಳ್ಳಿ ಮಂಜುನಾಥ್, ಸೇರಿದಂತೆ ಸಮಿತಿ ಸದಸ್ಯರು ಇದ್ದರು ಮುಂತಾದವರು ಇದ್ದರು.